ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಬಿಜೆಪಿ ಹಿರಿಯ ನಾಯಕ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ರವಿವಾರ 5 ಗಂಟೆಗೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಿಧರಾದರು ಎಂದು ತಿಳಿದುಬಂದಿದೆ.

ಇವರಿಗೆ 88 ವರ್ಷ ವಯಸ್ಸಾಗಿತ್ತು. ಮೂರು ಬಾರಿ ಉತ್ತರಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿದ್ದರು. ಡಿಸೆಂಬರ್ ನಲ್ಲಿ ಕೈ ಮುರಿತ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದರು.

ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಅವರನ್ನು ಮನೆಗೆ ಕರೆತರಲಾಯಿತು, ತಮ್ಮ ನಿವಾಸದಲ್ಲಿ ಅವರು ರವಿವಾರದ ನಸುಕಿನಲ್ಲಿ ನಿಧನರಾದರು ಎನ್ನಲಾಗಿದೆ.

Scroll to Top