ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ.08.  ಬೈಕೊಂದು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಉಳ್ಳಾಲದ ಬಳಿ ವರದಿಯಾಗಿದೆ.

ಗಾಯಗೊಂಡವರನ್ನು ಬೈಕ್ ಸವಾರ ಸವಾರ ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣೆ ರೈ (20) ಎಂದು ಗುರುತಿಸಲಾಗಿದೆ.

ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತಲೆಗೆ ಗಾಯವಾಗಿರುವುದರಿಂದ ಇವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ  ದಾಖಲಿಸಲಾಗಿದೆ. ಬೈಕ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top