ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.08.  ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನಿಗೆ ರಿಟ್ಜ್ ಕಾರು ಢಿಕ್ಕಿ ಹೊಡೆದು ಸುಮಾರು 15 ಮೀಟರ್ ಎಳೆದುಕೊಂಡು ಹೋದ ಘಟನೆ ಮಲ್ಪೆ ಕಾರ್ನೆಟ್ ಜಂಕ್ಷನ್ ಬಳಿ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಈ ಭಯನಕ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಲ್ಪೆ ಕಾರ್ನೆಟ್ ಜಂಕ್ಷನ್  ಬಳಿ ವ್ಯಕ್ತಿಯೋರ್ವ ಸ್ಕೂಟಿ ಕ್ರಾಸ್ ಮಾಡುತ್ತಿದ್ದ ವೇಳೆ ಸ್ಪೀಡ್ ಆಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಕೂಟಿ  ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಬಗ್ಗೆ  ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top