(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08. ಆಯಾ ಕ್ಷೇತ್ರಗಳಲ್ಲಿನ ಅವರ ಕಾರ್ಯವನ್ನು ಗುರುತಿಸಿ ಆರು ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು ಎಂದು ವರದಿಯಾಗಿದೆ.
ಇನ್ಫೋಸಿಸ್ ಸೈನ್ಸ್ ಫೌಂಡೇಶನ್ ಲಾಭೋದ್ದೇಶವಿಲ್ಲದ ಟ್ರಸ್ಟ್ ಆಗಿದ್ದು, ಸಂಸ್ಥೆಯು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಮಾನವಿಕತೆ, ಜೀವ ವಿಜ್ಞಾನ, ಗಣಿತ ವಿಜ್ಞಾನ, ಭೌತಿಕ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕ್ಷೇತ್ರಗಳಲ್ಲಿನ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಗೌರವಿಸುತ್ತದೆ. ಭಾರತ ಮತ್ತು ಪ್ರಪಂಚದ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಇನ್ಫೋಸಿಸ್ ಈ ಪ್ರಶಸ್ತಿಯನ್ನು ನೀಡುತ್ತಿದೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಮಹೇಶ್ ಕಾಕಡೆ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಕುಲಪತಿ ಪ್ರೊ. ಸುಧೀರ್ ಕೃಷ್ಣಸ್ವಾಮಿ ಸೇರಿದಂತೆ ಆರು ಮಂದಿ ನಿನ್ನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.