ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ.

ಬಂಧಿತಳಿಂದ 2.30 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾಳೆ ಎಂದು ನೀಡಿದ ದೂರನ್ನು ಪಡೆದು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎನ್ನಲಾಗಿದೆ.

Scroll to Top