ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ

(ನ್ಯೂಸ್ ಕಡಬ) newskadaba.com ಮುಂಬೈ, ಜ.08. ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

ಹೌದು… ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್​ ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು, 16ನೇ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.

Also Read  ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ...!

 

error: Content is protected !!
Scroll to Top