ಬಂಟ್ವಾಳ: ಎಂಟನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 08. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದ ಮಣಿಲದಲ್ಲಿ ಭಾನುವಾರದಂದು ನಡೆದಿದೆ.

 


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್ ಎಂದು ಗುರುತಿಸಲಾಗಿದೆ. ಇಲ್ಲಿನ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲ ಪುಣಚ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತರಗತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಬೆಳಗ್ಗೆ ಪೂಜೆಗೆ ಹೋಗಿ ಬಂದಿದ್ದು, ನಾಳೆ ಪರೀಕ್ಷೆ ಇರುವ ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಮನೆಯಲ್ಲಿಯೇ ಉಳಿದಿದ್ದ ಎನ್ನಲಾಗಿದೆ.

Also Read  ಸರಸ್ವತೀ ವಿದ್ಯಾಲಯದಲ್ಲಿ ಪ್ರೌಢ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ನೇಜಿ ಕಟಾವು ಕಾರ್ಯ

error: Content is protected !!
Scroll to Top