ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 09. ಇಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಬಂಧಿತರನ್ನು ರಾಧಾಕೃಷ್ಣ(45) ಹಾಗೂ ವಿಶ್ವಾಸ್. ಎನ್ (19) ಎಂದು ಗುರುತಿಸಲಾಗಿದೆ. ಜ. 05ರಂದು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನನ್ನು ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿದ ಬಳಿಕ ತಂಡವು ಅತನಿಗೆ ಹಲ್ಲೆ ಮಾಡಿರುವುದಾಗಿ ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದ ಹಫೀದ್‌ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದರು. ಇದೇ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ತಂದೆಯು ಹಫೀದ್‌ ವಿರುದ್ಧ ಪುತ್ರಿಯ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರು. ಈ ಕುರಿತು ಹಫೀದ್‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Also Read  ಕಡಬ: ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗಗ್ರಹಣ ಸಮಾರಂಭ

error: Content is protected !!
Scroll to Top