ಮಂಗಳೂರು: ಲೋಕಾಯುಕ್ತ ಅಧೀಕ್ಷಕರಾದ ಲಕ್ಷ್ಮೀಗಣೇಶ್ ರವರ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09.  ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ  ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ರವರು ದಿಢೀರ್ ವರ್ಗಾವಣೆಯಾಗಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.

ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಹುದ್ದೆಯನ್ನು ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ಇತ್ತೀಚೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಕ್ರಮ ಗಣಿಗಾರಿಕೆ,ಮರಳುಗಾರಿಕೆಯ ವಿರುದ್ದ ಕಾನೂನು ಸಮರಕ್ಕೆ ಮುಂದಾಗಿದ್ದರು. ರಾಜಕಾರಣಿಗಳ  ಕೆಂಗಣ್ಣಿಗೂ ಗುರಿಯಾಗಿದ್ದರು ಎನ್ನಲಾಗಿದೆ.

Scroll to Top