ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ.09.  ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನವೊಂದು ಪಲ್ಟಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ವರದಿಯಾಗಿದೆ.

ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಮದ್ಯ ರಸ್ತೆ ಪಾಲಾಗಿದೆ. ಕಲಬುರಗಿ ನಗರ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಟಲಿಗಳು ನಾಶವಾಗಿವೆ. ಚಾಲಕ, ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group