ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ



(ನ್ಯೂಸ್ ಕಡಬ)newskadaba.com  ವಿಟ್ಲ, ಜ.09.  8 ನೇ ತರಗತಿಯ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ.







ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪುಣಚ ರವೀಂದ್ರ ಎಂಬವರ ಪುತ್ರ ಹೇಮಂತ್(14) ಎಂದು ಗುರುತಿಸಲಾಗಿದೆ. ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಲ್ಲಿ ಹೇಮಂತ್ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ‌. ಮನೆ ಮಂದಿಯೆಲ್ಲಾ ಪುಣಚ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.






 

error: Content is protected !!
Scroll to Top