ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.09.  ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಎತ್ತುಗಳು ಸಜೀವ ದಹನವಾದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ವರದಿಯಾಗಿದೆ.

ಸಿದ್ದರಾಜು ಎಂಬುವವರಿಗೆ ಸೇರಿದ ಎರಡು ಎತ್ತುಗಳು ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ ಎಂದು ತಿಳಿದುಬಂದಿದೆ. ಬಳಿಕ ಅಗ್ನಿ ಶಾಮಕ ದಳ ಹಾಗೂ ಠಾಣೆಗೆ ಮಾಹಿತಿ ನೀಡಿದರು. ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಪರಾಜು ಮನವಿ ಮಾಡಿದರು ಎನ್ನಲಾಗಿದೆ.

Scroll to Top