ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಕೊಳ್ಳೆಗಾಲ, ಜ.09. ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲದ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಬಂಧಿತರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ.

ಇವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.
ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಸಾಗಾಣೆ ಮಾಡಲು ಬಳಸಿದ್ದ ಬೈಕ್ ಮತ್ತು ಜೀವಂತ ಗೂಬೆಯನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Scroll to Top