ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.09. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಬಂಧನವನ್ನು ಖಚಿತಪಡಿಸಿದ್ದಾರೆಂದು ವರದಿ ತಿಳಿಸಿದೆ.

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.ದಾಳಿಯಲ್ಲಿ ರವಿ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also Read  ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

 

error: Content is protected !!
Scroll to Top