ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ

Crime

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ.


ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡುತ್ತಿದ್ದು, 244 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಮಾಸ್ಕೋದಿಂದ ಟೇಕಾಫ್ ಆಗಿದ್ದ ಈ ವಿಮಾನವು ಡಬೋಲಿಮ್ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿತ್ತು. ಸದ್ಯ ಡಬೋಲಿಮ್ ಏರ್ಪೋರ್ಟ್ನ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದೆ ಎನ್ನಲಾಗಿದೆ.


ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಅಧಿಕಾರಿಗಳು ಈ ನಡುವೆ ತಪಾಸಣೆ ನಡೆಸಿದ ವಿಮಾನದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಗೆ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

error: Content is protected !!

Join the Group

Join WhatsApp Group