(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ಮೀಸಲು ಅರಣ್ಯ ಪ್ರದೇಶದಿಂದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳನ್ನು ಕಮಲಾನಗರ ನಿವಾಸಿ ಪೊನ್ನರಾಜ್ ಅಲಿಯಾಸ್ ಪೊನ್ನ(35), ಲಗ್ಗೆರೆ ಪ್ರೇಮನಗರ ನಿವಾಸಿ ಧೃವಕುಮಾರ್(29), ಮೀನಾಕ್ಷಿ ನಗರದ ಸಿದ್ದಪ್ಪ(27) ಹಾಗೂ ಮಾಗಡಿಯ ಹರೀಶ್(34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 16.50 ಲಕ್ಷ ಮೌಲ್ಯದ 330 ಕೆ.ಜಿ. ತೂಕದ ಶ್ರೀಗಂಧದ ಮರದ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಎ.ಎಸ್.ಐ ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು ಎನ್ನಲಾಗಿದೆ.