ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!!

(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಜ. 10.  ಹಾವು ಬಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ ನ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ.

ಬೇಳೆ ತುಂಬಿದ್ದ ಕಂಟೈನರ್ ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ಮಕ್ಕಳನ್ನು ತಕ್ಷಣವೇ ರಾಂಪುರ್ ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಲ್ಲೇ ಇರುವ ವಿದ್ಯಾರ್ಥಿಗೂ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಸಿದಂತೆ ಪೋಷಕರು ಶಾಲೆಯ ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Also Read  ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌

error: Content is protected !!
Scroll to Top