ಅಂಗಡಿಯೊಂದಕ್ಕೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.10.  ಪೇಂಟ್ಸ್ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಡಿಕೇರಿಯ ಗೋಣಿಕೊಪ್ಪಲುವಿನ ಮುಖ್ಯ ರಸ್ತೆಯ ಬಳಿ ಮಂಗಳವಾರದಂದು ವರದಿಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕಪಡೆಯ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಲು ಯತ್ನಿಸಿದಾಗ ನೀರು ಖಾಲಿಯಾಗಿದೆ ಎಂದು ತಿಳಿದುಬಂದಿದೆ. ಬೆಂಕಿ ಧಗಧಗಿಸುತ್ತಿತ್ತು, ಸದ್ಯ ಗ್ರಾಮ ಪಂಚಾಯಿತಿ ನೀರಿನ ವ್ಯವಸ್ಥೆ ಮಾಡಿದೆ. ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹರಡುವ ಭೀತಿ ಮೂಡಿದೆ ಎನ್ನಲಾಗಿದೆ.

error: Content is protected !!
Scroll to Top