ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ.

ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

Also Read  ಕ್ಯಾಂಪಸ್ ಫ್ರಂಟ್ ಕುಂದಾಪುರ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ➤ ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ

a

 

 

 

error: Content is protected !!
Scroll to Top