ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ..

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28  ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು ಎನ್ನಲಾಗಿದೆ.

Also Read  ಸ್ಕೂಲ್ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು..!

 

 

error: Content is protected !!
Scroll to Top