ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10.  ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಗುತ್ತಿದಾರರ ಸಂಘದ ಪದಾಧಿಕಾರಿಗಳು, ಪಾಲಿಕೆ ಅನುದಾನದಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಕಳೆದ 25 ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ ರೂ.2,700 ಕೋಟಿಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಗುತ್ತಿಗೆದಾರರಿಗೆ ಕಾರ್ಯನಿರ್ವಹಿಸಲು, ಕೆಲಸಗಾರರಿಗೆ ವೇತನ ನೀಡಲು ಕಷ್ಟವಾಗುತ್ತಿದ್ದು, ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ಪೌರಕಾರ್ಮಿಕರು ಬಾಕಿ ಪಾವತಿಸದ ಕಾರಣ ಗುತ್ತಿಗೆದಾರರು ಸಾಲದ ಸುಳಿಗೆ ಸಿಲುಕಿದ್ದಾರೆ. ಅಧಿಕಾರಿಗಳು ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಹೀಗಾಗಿ ಬಾಕಿ ಹಣ ಪಾವತಿ ಮಾಡದಿದ್ದರೆ, ಫೆಬ್ರವರಿ 1 ರಿಂದ ನಾವು ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆಂದು ಹೇಳಿದ್ದಾರೆ.

Also Read  ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ

 

 

error: Content is protected !!
Scroll to Top