ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿದೆ. ಪರಿಣಾಮ ತಾಯಿ ಹಾಗೂ ಮಗುವಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Also Read  ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್

 

 

error: Content is protected !!
Scroll to Top