(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹೆಣ್ಣು ಸಮಾಜದ ಕಣ್ಣು, ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ನೀಡುವ ಭರವಸೆಗಳನ್ನು ಘೋಷಣೆ ಮಾಡಲಿದ್ದಾರೆ. ಪ್ರಿಯಾಂಕ ಗಾಂಧಿ ಅವರು ಮಹಿಳೆಯರ ಧ್ವನಿಯಾಗಿ ಸಂದೇಶ ನೀಡುತ್ತಿದ್ದಾರೆ. ಇದು ಮಹಿಳೆಯರಿಗಾಗಿ ನಾವು ಮಾಡುವ ಕೆಲಸದ ಬಗ್ಗೆ ಗ್ಯಾರಂಟಿ ಪತ್ರವಾಗಲಿದೆ ಎಂದು ಭರವಸೆ ನೀಡಿದ್ದಾರೆ.