ಸಿಎಂಗೆ ಕಪ್ಪುಬಟ್ಟೆ ಪ್ರದರ್ಶನಕ್ಕೆ ಯತ್ನ ➤ ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ, ಜ.10.  ಪಿಎಸ್‍ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ಆಗ್ರಹಿಸಿ, ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮಂಗಳವಾರದಂದು ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಪ್ಪು ಬಟ್ಟೆಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತ್ಯಾಗವೀರ ಶಿರಸಂಗಿ ಲಿಂಗರಾಜರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಂತೆಯೇ ಅಲ್ಲಿ ಸೇರಿದ ಯುವಕರು ಘೋಷಣೆಗಳನ್ನು ಕೂಗುತ್ತ ಅಡ್ಡಿಪಡಿಸಲು ಮುಂದಾದರು. ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆಯಗಿದೆ ಎಂದು ತಿಳಿದುಬಂದಿದೆ.

Also Read  200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ

error: Content is protected !!
Scroll to Top