ನಾಪತ್ತೆಯಾದ ಬಾಲಕಿಯನ್ನು ಮನೆಗೆ ಸೇರಿಸಿದ ಆಟೋ ಚಾಲಕನಿಗೆ ಸನ್ಮಾನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10.  ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯನ್ನು ಸಾಮಾಜಿಕ ಜಾಲತಾಣದಲ್ಲಿನ ಫೋಟೋದಿಂದ ಪತ್ತೆ ಹಚ್ಚಿ ಆಕೆಯನ್ನು ಪೋಷಕರ ಮಡಿಲಿಗೆ ಆಟೋ ಚಾಲಕರೊಬ್ಬರು ಸುರಕ್ಷಿತವಾಗಿ ಸೇರಿಸಿದ ಘಟನೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

 

ಬಾಲಕಿಯನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ ಆಟೋ ಚಾಲಕನನ್ನು ಸೋಮಶೇಖರ್‌ ಎಂದು ಗುರುತಿಸಲಾಗಿದೆ.

ಬಾಲಕಿಯನ್ನು ರಕ್ಷಿಸಿವಾಗಿ ಒಪ್ಪಿಸಿದ ಆಟೋ ಚಾಲಕ ಸೋಮಶೇಖರ್‌ ಅವರನ್ನು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಅಭಿನಂದಿಸಿದ್ದಾರೆ. ಎರಡು ದಿನಗಳ ಹಿಂದೆ ಶಾಲೆಗೆ ಚಕ್ಕರ್‌ ಹಾಕಿ ಮಾಲ್‌ಗೆ ಸ್ನೇಹಿತರ ಜತೆ ಬಾಲಕಿ ತೆರಳಿದ್ದಳು. ಈ ವಿಚಾರ ಗೊತ್ತಾಗಿ ಶಾಲೆಯ ಪ್ರಾಂಶುಪಾಲರು, ಶಾಲೆಗೆ ಆಕೆಯ ಪೋಷಕರನ್ನು ಕರೆಸಿ ಬುದ್ಧಿಮಾತು ಹೇಳಿದ್ದರು. ಇದರಿಂದ ಬೇಸರಗೊಂಡ ಆಕೆ, ಮನೆ ಬಿಟ್ಟು ಹೋಗಿದ್ದಳು. ಮಗಳ ಪತ್ತೆಗೆ ಹುಡುಕಾಡಿದ ಪೋಷಕರು, ಕೊನೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎನ್ನಲಾಗಿದೆ.

error: Content is protected !!

Join the Group

Join WhatsApp Group