ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಫಲಾನುಭವಿಗಳಿಗೆ ಕೊಳವೆ ಬಾವಿ ಸೌಲಭ್ಯ ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  

(ನ್ಯೂಸ್ ಕಡಬ)newskadaba.com  ಮೈಸೂರು, ಜ.10. ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಕೊಳವೆಬಾವಿಗಳನ್ನು ಕೊರೆಸಿ ಪಲಾನುಭವಿಗಳಿಗೆ ನೀಡಲಾಗುತ್ತಿದ್ದು, ಹಿಂದೆ ಕೊಳವೆ ಬಾವಿ ಕೊರೆದ ಹಣವನ್ನು ಏಜೆನ್ಸಿಗಳಿಗೆ ನೀಡಲಾಗುತಿತ್ತು. ಆದರೆ, ಪಾರದರ್ಶಕತೆಯನ್ನು ಕಾಪಾಡಲು ಪಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.

ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಅರಿವು ಮೂಡಿಸುವ ಕಾರ್ಯಾಗಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಶಿಕ್ಷಣ, ಸಂಪತ್ತು, ಅಭಿವೃದ್ದಿ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದವು. ವೈದ್ಯರ ಮಗ ವೈದ್ಯ, ಅಧಿಕಾರಿಯ ಮಗ ಅಧಿಕಾರಿ ಆಗುತ್ತಿದ್ದರು. ಆದರೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ಎಲ್ಲಾ ವರ್ಗದವರಿಗೂ ಅವಕಾಶಗಳನ್ನು ಕಲ್ಪಿಸಿದರು. ಇದರಿಂದ ಇಂದು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಬಡವರ ಮಕ್ಕಳು ಸಹ ವೈದ್ಯರಾಗುವ ಹಾಗೂ ಅಧಿಕಾರಿಗಳಾಗುವ ಅವಕಾಶ ದೊರಕಿದೆ ಎಂದು ತಿಳಿಸಿದರು.

Also Read  ಸುವೇಂದು ಅಧಿಕಾರಿಯನ್ನು ಸೋಲಿಸಿ ಗೆಲುವಿನ ನಗೆ ಬೀರಿದ ದೀದಿ ➤ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ

 

error: Content is protected !!
Scroll to Top