ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ➤ ಬಿಎಂಆರ್ ಸಿಎಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10.  ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರವನ್ನು ಬಿಎಂಆರ್ ಸಿಎಲ್ ಪ್ರಕಟಿಸಿದೆ ಎಂದು ವರದಿಯಾಗಿದೆ.

 

ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ಕಬ್ಬಿಣದ ರಾಡ್‌ಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದಿದ್ದವು. ಇದರಿಂದಾಗಿ  ಗಂಭೀರವಾಗಿ ಗಾಯಗೊಂಡಿದ್ದ  ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ  ಆಸ್ಪತ್ರೆಯಲ್ಲಿ ಮೃತಪಟ್ಟು, ತಂದೆ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿತ್ತು.

Also Read  ರೇಣುಕಾಸ್ವಾಮಿ ಕೊಲೆ ಕೇಸ್‌: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ ಸ್ಥಳಾಂತರ

error: Content is protected !!
Scroll to Top