ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ➤ ವ್ಯಕ್ತಿ ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಮುಂಬೈ, ಜ. 10.  ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್‌ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮುಂಬೈ ನಲ್ಲಿ ವರದಿಯಾಗಿದೆ.

ನೈನಿತಾಲ್ ಮೂಲದ ವ್ಯಕ್ತಿ ಕೊಕೇನ್ ಅನ್ನು “ಡಫಲ್ ಬ್ಯಾಗ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹ್ಯಾಂಡ್ ಬ್ಯಾಗ್ ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದಾಗ ಅನುಮಾನಗೊಂಡ ಪೊಲೀಸರು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಡ್ರಗ್ಸ್ ಪತ್ತೆಯಾಗಿದೆ” ಎಂದು ಪ್ರಕಟಣೆ ತಿಳಿಸಿದೆ. ವಿಚಾರಣೆ ವೇಳೆ ಆರೋಪಿ ತಾನು ಹನಿಟ್ರ್ಯಾಪ್ ಗೆ ಒಳಗಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರು ತನ್ನನ್ನು ಬೆದರಿಸಿ ಈ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾನೆ ಎಂದು ತಿಳಿದು ಬಂದಿದೆ.

Also Read  ಕೇರಳ: ಪರಿಶಿಷ್ಟ ಪಂಗಡ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್

error: Content is protected !!
Scroll to Top