ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.13. ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ಘಟನೆ ಬುಧವಾರದಂದು ಬಿ.ಸಿ.ರೊಡಿನ ರೈಲು ನಿಲ್ದಾಣದ ಬಳಿ ನಡೆದಿದೆ.

ಮೃತ ಯುವಕನಿಗೆ ಸುಮಾರು 25 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಈತ ರಾತ್ರಿ ವೇಳೆಯಲ್ಲಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರಬೇಕು ಎಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿ ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದು, ಮಂಗಳೂರು ವಿಭಾಗದ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಜಯಾನಂದ ಕೆ. ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

Scroll to Top