ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.11.  ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ದಶಪಥ ಹೈವೆಗೆ ಹೆಸರಿಡುವ ವಿಚಾರವಾಗಿ  ಸಂಸದರ ನಡುವೆ ಪೈಪೋಟಿ ಶುರುವಾಗಿದೆ ಎಂದು ತಿಳಿದು ಬಂದಿದೆ.

ಕಾವೇರಿ ಮತ್ತು ಕೃಷ್ಣರಾಜ ಒಡೆಯರ್ ಹೆಸರಿಡಿಸಲು ಮೈಸೂರು ಮಂಡ್ಯ ಸಂಸದರ ನಡುವೆ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ. ಕಾವೇರಿ ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಒತ್ತಾಯ ಮಾಡುತ್ತಿದ್ದು, ಇತ್ತ ನಾಲ್ವಡಿ ಹೆಸರಿಡುವಂತೆ ಮಂಡ್ಯ ಸಂಸದೆ ಸುಮಲತಾ ಸಿಎಂಗೆ ಪತ್ರ ಬರೆದಿದ್ದಾರೆ. ಇದಕ್ಕೆ ಎಂಎಲ್​ಸಿ ದಿನೇಶ್ ಗೂಳಿಗೌಡ ಸಹಮತ ನೀಡಿದ್ದಾರೆ. ಕಾವೇರಿ ಅಥವಾ ಒಡೆಯರ್​ ಯಾವ ಹೆಸರಿಡಬೇಕು ಎಂಬ ಗೊಂದಲದಲ್ಲಿ ಸಿ.ಎಂ. ಬೊಮ್ಮಾಯಿ ಇದ್ದಾರೆ. ಇನ್ನು ಈ ವರ್ಷ ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಲೋಕಾರ್ಪಣೆಯಾಗಲಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿಗಳನ್ನು ಆಹ್ವಾನಿಸುತ್ತೇವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೆಡೆ ಇನ್ನೂ ಕೆಲಸಗಳು ಬಾಕಿ ಉಳಿದಿವೆ. 4,473 ಕೋಟಿ ರೂ. ವೆಚ್ಚದಲ್ಲಿ ಒಟ್ಟು 118 ಕಿ.ಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಮೊದಲ ಹಂತದ ಕಾಮಗಾರಿಯು ಬೆಂಗಳೂರಿನ ಪಂಚಮುಖಿ ಆಂಜನೇಯ ದೇವಾಲಯದಿಂದ ಹಿಡಿದು ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನವರೆಗೂ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.

Also Read  ವಿವಿಧ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರಕಾರ ► ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ವರ್ಗಾವಣೆ

error: Content is protected !!
Scroll to Top