ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ.

ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top