ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಜ.11.  ಟಾಲಿವುಡ್ ಸ್ಟಾರ್ ಗಳಾದ ಜೂನಿಯರ್ ಎನ್ ಟಿ ಆರ್ ಮತ್ತು ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕೋವಿಡ್ ಕಾರಣಕ್ಕಾಗಿ ಚಿತ್ರತಂಡ ಜ. 1 ರಂದು ಬಿಡುಗಡೆಯಾಗಬೇಕಿದ್ದ ದಿನಾಂಕವನ್ನು ಮುಂದೂಡಲಾಗಿತ್ತು. ಸದ್ಯದಲ್ಲೇ ಬೇರೆ ದಿನಾಂಕವನ್ನು ಘೋಷಿಸಲಾಗುತ್ತದೆ ಎಂದು ಹೇಳಿದ್ದರು. ಬಳಿಕ ಮಾರ್ಚ್ 18ರಿಂದ ಏಪ್ರಿಲ್ 28ರೊಳಗೆ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದ ಚಿತ್ರತಂಡ ಕೊನೆಗೂ ಎಲ್ಲಾ ಅಡೆತಡೆಗಳನ್ನು ಮೀರಿ ಮಾರ್ಚ್ 25ರಂದು ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

Also Read  93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ - 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ

error: Content is protected !!
Scroll to Top