ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ.

ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Also Read  ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು - ಸ್ಥಳೀಯರಿಂದ ಪ್ರತಿಭಟನೆ

 

error: Content is protected !!