9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                 

(ನ್ಯೂಸ್ ಕಡಬ)newskadaba.com ನವದೆಹಲಿ, ಜ.11. 9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ 7 ನ್ಯಾಯಾಧೀಶರು ಮತ್ತು ಇಬ್ಬರು ನ್ಯಾಯವಾದಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ನ್ಯಾಯಾಧೀಶರಾದ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳಾಗಿ ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಶಿಫಾರಸು ಮಾಡಲಾಗಿದ್ದ ನಾಗೇಂದ್ರ ರಾಮಚಂದ್ರ ನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ಜಡ್ಜ್ ಆಗಿ ನೇಮಕ ಮಾಡಲು ಮತ್ತೆ ಶಿಫಾರಸು ಮಾಡಲಾಗಿದೆ.

Also Read  ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

 

 

 

error: Content is protected !!
Scroll to Top