ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.11.  ಶಾಸಕ ಬಸವರಾಜ ದಢೇಸೂಗೂರು ಅವರಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರದಂದು ಧಾರವಾಡ ಜಿಲ್ಲೆಯ ಮೈಲಾಪುರ ಕ್ರಾಸ್‌ ಬಳಿ ನವರದಿಯಾಗಿದೆ.

ಮೃತರನ್ನು ಮರಿಯಮ್ಮ ನಾಯಕ(70) ಎಂದು ಗುರುತಿಸಲಾಗಿದೆ.

ಮೈಲಾಪುರ ಕ್ರಾಸ್‌ ಬಳಿಯ ಬಸ್‌ ನಿಲ್ದಾಣದಿಂದ ರಸ್ತೆ ದಾಟುತ್ತಿದ್ದಾಗ ಶಾಸಕರಿದ್ದ ಕಾರು ದಿಢೀರ್‌ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ವೃದ್ಧೆಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಾಸಕರು ತಕ್ಷಣ ಮರಿಯಮ್ಮರನ್ನು ತಮ್ಮದೇ ಕಾರಿನಲ್ಲಿ ಚಿಕಿತ್ಸೆಗಾಗಿ ಕಾರಟಗಿ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಮರಿಯಮ್ಮ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಬಳ್ಳಾರಿ ವಿಮ್ಸ್‌ಗೆ ಕರೆದೊಯ್ಯುತ್ತಿದ್ದಾಗಲೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಲಾಪುರ ಗ್ರಾಮದ ಮಗಳ ಮನೆಯಲ್ಲಿ ವಾಸ ಮಾಡುತ್ತಿದ್ದ ಮರಿಯಮ್ಮ ಅವರು ವೃದ್ಧಾಪ್ಯವೇತನ ಪಡೆಯುಲು ಚಳ್ಳೂರು ಗ್ರಾಮಕ್ಕೆ ತೆರಳಿದ್ದರು. ವಾಪಸ್‌ ಮಗಳ ಮನೆಗೆ ಆಗಮಿಸುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

error: Content is protected !!