ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!   

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಜ.12. ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಮ್ಮಾಪುರ ಗ್ರಾಮದಲ್ಲಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ರೇಖಾ(28) ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2)ಗೆ ವಿಷವುಣಿಸಿ ತಾವು ಕೂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ‌. ಘಟನೆಯಲ್ಲಿ ನಾಲ್ವರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರೇಖಾ ಮಾನಸಿಕ ಸಮಸ್ಯೆ ಕೂಡ ಹೊಂದಿದ್ದು, ಈ‌ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ► ಉಡುಪಿ: ಮರಳು ಲಾರಿಗೆ ಬಾಲಕ ಬಲಿ

 

 

 

error: Content is protected !!
Scroll to Top