ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬದಲಾವಣೆ ► 2018 ಮಾರ್ಚ್ 01 ರಿಂದ ಪಬ್ಲಿಕ್ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13. ಪದವಿ ಪೂರ್ವ ಶಿಕ್ಷಣ ಇಲಾಖೆಯು 2018 ನೆ ಸಾಲಿನ ದ್ವಿತೀಯ ಪಿಯುಸಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾಯಿಸಿದ್ದು, ಮಾರ್ಚ್ 1 ರಿಂದ ಆರಂಭವಾಗಿ 17 ರಂದು ಪರೀಕ್ಷೆ ಮುಗಿಯಲಿದೆ.

2018ರ ಮಾರ್ಚ್ 01 ಗುರುವಾರದಂದು ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 02 ಶುಕ್ರವಾರದಂದು ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್‌ನೆಸ್, ಮಾರ್ಚ್ 03 ಶನಿವಾರದಂದು ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮಾರ್ಚ್ 05 ಸೋಮವಾರದಂದು ವ್ಯವಹಾರ ಅಧ್ಯಯನ, ಜೀವಶಾಸ್ತ್ರ, ಮಾರ್ಚ್ 06 ಮಂಗಳವಾರದಂದು ಉರ್ದು, ಸಂಸ್ಕೃತ, ಮಾರ್ಚ್ 07 ಬುಧವಾರದಂದು ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ, ಮಾರ್ಚ್ 08 ಗುರುವಾರದಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ, ಮಾರ್ಚ್ 09 ಶುಕ್ರವಾರದಂದು ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, ಮಾರ್ಚ್ 10 ಶನಿವಾರದಂದು ಇತಿಹಾಸ, ಸಂಖ್ಯಾಶಾಸ್ತ್ರ, ಮಾರ್ಚ್ 12 ಸೋಮವಾರದಂದು ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್, ಮಾರ್ಚ್ 13 ಮಂಗಳವಾರದಂದು ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾರ್ಚ್ 14 ಬುಧವಾರದಂದು ಕನ್ನಡ, ಮಾರ್ಚ್ 15 ಗುರುವಾರದಂದು ಹಿಂದಿ, ಮಾರ್ಚ್ 16 ಶುಕ್ರವಾರದಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್ 17 ಶನಿವಾರದಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ.

Also Read  ಬೆಂಗಳೂರಿನಿಂದ ಕಾಣೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಮೇಲ್ಕಂಡ ಎಲ್ಲ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

error: Content is protected !!
Scroll to Top