(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.12. ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇದರ ಬೆನ್ನಲ್ಲೇ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿದುಬಂದಿದೆ.
ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲು ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ, ಮೋಟಾರು ವಾಹನ ಇಲಾಖೆ, ಅಗ್ನಿ ಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.
Also Read ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ