ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಸ್ಕತ್, ಜ.12. ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಮಸ್ಕತ್ ನಲ್ಲಿ ವರದಿಯಾಗಿದೆ.

ಕೇರಳ ಮೂಲದ ಯುವಕ ಮೃತಪಟ್ಟವರು ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತಗೊಂಡು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಬ್ಯಾಡ್ಮಿಂಟನ್ ಆಟದ ವೇಳೆ‌ ನಡೆದ ಹೃದಯಾಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.

Also Read  ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

 

error: Content is protected !!
Scroll to Top