ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ➤  ಸಿದ್ದರಾಮಯ್ಯ ಆಕ್ರೋಶ         

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.12. ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟೀಕಿಸಿದ್ದು ಇದು ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನ, ಸೈಕಲ್ ನೀಡುವ ಯೋಜನೆ ನಿಲ್ಲಿಸಲಾಗಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ಐದು ಲಕ್ಷ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ ಕಂಡಿದೆ. ಯುವಜನರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ ರಾಜಕೀಯಕ್ಕಾಗಿ ಕೋಮುವಾದಿ ಚಟುವಟಿಕೆಗಳಿಗೆ ಕಾಲಾಳುಗಳಾಗಿ ಬಳಸಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದ ಮೋದಿ, ಎಂಟು ವರ್ಷಗಳಲ್ಲಿ 12.50 ಕೋಟಿ ಉದ್ಯೋಗಗಳನ್ನು ಕಿತ್ತುಕೊಂಡಿದ್ದಾರೆ. ವಿವಿಧ ಇಲಾಖೆಗಳಲ್ಲಿ ಉದ್ಯೋಗ ಖಾಲಿ ಇದೆ ಆದರೆ ಅದನ್ನು ಭರ್ತಿ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ನೋಟು ನಿಷೇಧದ ಮೂರ್ಖ ತೀರ್ಮಾನದಿಂದ 50 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ 62 ಲಕ್ಷ ಹುದ್ದೆಗಳು ಖಾಲಿ ಇವೆ. ನಿರುದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ನಿರ್ಲಕ್ಷ್ಯದ ಮೂಲಕ ಯುವಜನರನ್ನು ವಿನಾಶದ ಅಂಚಿಗೆ ತಳ್ಳಿರುವ ಪ್ರಧಾನಿಗೆ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ಯಾವ ನೈತಿಕತೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Also Read  ದತ್ತಪೀಠದಲ್ಲಿನ ಗೋರಿಗಳು ನಕಲಿಗಳೇ ಹೊರತು ಅಸಲಿಗಳಲ್ಲ ► ಚಿಕ್ಕಮಗಳೂರು ಶಾಸಕ‌ ಸಿ.ಟಿ.ರವಿ ಹೇಳಿಕೆ

 

error: Content is protected !!
Scroll to Top