ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ.

ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ ಉಗ್ರ ಮಾಝ್‌ ಮುನೀರ್‌ನ ಸ್ನೇಹಿತನಾಗಿದ್ದ. ಮಾಝ್‌ ಮುನೀರ್‌ನನ್ನು ಮಂಗಳೂರು ಉಗ್ರ ಪರ ಗೋಡೆ ಬರಹ ಹಾಗೂ ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ಗೆ ಸಂಬಂಧಿಸಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಳಿಕ ಎನ್‌ಐಎ ಈತನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Scroll to Top