ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!         

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ.

ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಇದು ಆತ್ಮಹತ್ಯೆಯೋ? ಅಥವಾ ಅಪಘಾತವೋ? ಎಂಬುವುದು ತಿಳಿದು ಬರಬೇಕಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Also Read  ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್

 

error: Content is protected !!
Scroll to Top