(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ ಎಂದು ತಿಳಿದುಬಂದಿದೆ.
ಪ್ರಮುಖವಾಗಿ ಎಲ್ಲಾ ವಿಷಯಗಳಲ್ಲೂ 1 ಅಂಕದ ಪ್ರಶ್ನೆಗಳನ್ನು 20ಕ್ಕೆ ಹೆಚ್ಚಿಸಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಉಳಿದಂತೆ 2, 3, 4, 5 ಮತ್ತು 6 ಅಂಕಗಳ ಪ್ರಶ್ನೆಗಳ ಸಂಖ್ಯೆಯನ್ನು ವಿಷಯವಾರು ಕೊಂಚ ಹೆಚ್ಚು ಕಡಿಮೆ ಮಾಡಲಾಗಿದೆ. ಒಟ್ಟಿನಲ್ಲಿ ಪ್ರಶ್ನೆ ಜೊತೆಯಲ್ಲೇ ಬಹು ಆಯ್ಕೆ ಉತ್ತರವನ್ನು ನೀಡಿ ಸರಿಯಾದ ಉತ್ತರ ಆರಿಸಿ ಬರೆಯುವುದು, ಬಿಟ್ಟಸ್ಥಳ ಭರ್ತಿ ಮಾಡುವುದು, ಹೊಂದಿಸಿ ಬರೆಯುವುದು ಹೀಗೆ ಮಕ್ಕಳಿಗೆ ಉತ್ತಮವಾಗಿ ಉತ್ತರಿಸಲು ಸಾಧ್ಯವಾಗುವ ಪ್ರಶ್ನೆಗಳ ಮಾದರಿಯನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.