ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾಸನ, ಜ.12. ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ವರದಿಯಾಗಿದೆ.

ಮೃತಪಟ್ಟವರನ್ನು ದಿಲೀಪ್ (21) ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಚ್ಚರಿ ಎಂದರೆ ದಿಲೀಪ್ ಅಣ್ಣ ಶ್ರೀಧರ್  2022ರ  ಜನವರಿ 9 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ವರ್ಷದ ಬಳಿಕ ಅದೇ ದಿನಾಂಕದಂದು ದಿಲೀಪ್ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಮಗನಿಗೆ ಕೊರೋನಾ ದೃಢ ➤ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರನಿಗೆ ಹೋಂ ಕ್ವಾರಂಟೈನ್

 

error: Content is protected !!
Scroll to Top