ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ. 12. ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಆರೋಪಿಯನ್ನು ಮನೋಹರ್ ನಾಯಕ್ ಎಂದು ಗುರುತಿಸಲಾಗಿದೆ. ಈತ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಇಬ್ಬರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದಾರೆ.

Scroll to Top