ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ

Accident

(ನ್ಯೂಸ್ ಕಡಬ) newskadaba.com ಹಾಸನ, ಜ.12. ಮೂರು ಬೈಕ್ ಗಳಲ್ಲಿ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ಗೆ ಹೊರಟಿದ್ದ ನಗರದ ಎನ್ ಡಿಆರ್ ಕೆ ಕಾಲೇಜಿನ ಆರು ವಿದ್ಯಾರ್ಥಿಗಳು, ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ.

ಗಾಯಗೊಂಡವರನ್ನು ಸ್ಮಿತಾ, ರಕ್ಷಿತ್, ರಕ್ಷಿತಾ, ಹರ್ಷಿತ್, ಮಹೇಶ್, ರೋಹಿತ್ ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರದ ಕ್ರಾಫರ್ಢ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಒಂದು ಬೈಕ್, ಪಕ್ಕದಲ್ಲಿ ಸಾಗತ್ತಿದ್ದ ಸ್ನೇಹಿತನ ಬೈಕ್ ಗೆ ಢಿಕ್ಕಿ ಹೊಡೆದಿದೆ. ಅದೇ ರೀತಿ ಮತ್ತೊಂದು ಬೈಕ್ ಗೂ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group