ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ. 12. ನವೆಂಬರ್ 2022ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ.

ಸಿಎ ಇಂಟರ್ ಮೀಡಿಯಟ್ ಪರೀಕ್ಷೆಯ ಎರಡು ವಿಭಾಗದಲ್ಲಿ ರಾಷ್ಟ್ರ ಮಟ್ಟದ ಫಲಿತಾಂಶ 12.72% ಆಗಿದ್ದು, ಆಳ್ವಾಸ್ ದೇಶಿಯ ಮಟ್ಟದಲ್ಲಿ 32.25% ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಸಿ.ಎ. ಸಂಯೋಜಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಆರ್ಥಿಕ ಗಣತಿ ಕುರಿತು ಜನರಿಗೆ ಸಂಕ್ಷಿಪ್ತ ಮಾಹಿತಿ ನೀಡಬೇಕು: ಜಿಲ್ಲಾಧಿಕಾರಿ

error: Content is protected !!
Scroll to Top