(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು 17 ರಂದು ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಮರುಹಂಚಿಕೆ ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಪಟ್ಟಿಯನ್ನು ಜ. 23ರಂದು ಪ್ರಕಟಿಸಲಾಗುತ್ತದೆ.
ಜ. 24 ರಂದು ಬ್ಲಾಕ್ ಹಂತದಲ್ಲಿ ಸಮರ್ಪಕ ಮರುಹೊಂದಾಣಿಕೆ ಕೌನ್ಸೆಲಿಂಗ್ ನಡೆಯಲಿದೆ. ಜ.30ರಂದು ಜಿಲ್ಲಾ ಹಂತದಲ್ಲಿ ಮರು ಹೊಂದಾಣಿಕೆ ಪ್ರಕ್ರಿಯೆ ನಡೆಯಲಿದೆ. ಫೆ.9ರಿಂದ 14ರವರೆಗೆ ಜಿಲ್ಲಾ ಹಂತದ ವರ್ಗಾವಣೆ ಕೌನ್ಸೆಲಿಂಗ್, ಫೆ.16ರಂದು ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್, ಫೆ.17ರಂದು ತಾಂತ್ರಿಕ ಸಹಾಯಕರ ಗಣಕೀಕೃತ ಕೌನ್ಸೆಲಿಂಗ್ ನಡೆಯಲಿದೆ.