ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವರದಿಯಾಗಿದೆ.

ಈ ಬಾರಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿದೆ. ಕೊನೆ  ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಸೇರ್ಪಡೆಯಾಗಿದೆ.  14ನೇ ಬಾರಿ ಕರ್ನಾಟಕ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ. ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಕರ್ನಾಟಕದ ನಾರಿಶಕ್ತಿ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

Also Read  ಜಾಹೀರಾತಿನ ಮೂಲಕ ಉದ್ಯೋಗಕ್ಕಾಗಿ ಆನ್ ಲೈನ್ ನಲ್ಲಿ ಸಂಪರ್ಕ     ➤ 9.79 ಲಕ್ಷ ರೂ. ವಂಚನೆ…!

error: Content is protected !!
Scroll to Top