ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.13.  ರಾಜ್ಯದಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಐದು ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಐದು ದಿನಗಳ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ ಅವರು, ಈ ಯೋಜನೆಯಿಂದ ಯುವಕರು ಸ್ವಯಂ ಉದ್ಯೋಗಿಗಳಾಗಲು ಅನುವು ಮಾಡಿಕೊಡುವ ಗುರಿಯನ್ನು ಹೊಂದಿದ್ದು, ಸ್ಫೂರ್ತಿಯ ಚಿಲುಮೆಯಾಗಿರುವ ಸ್ವಾಮಿ ವಿವೇಕಾನಂದರ ಹೆಸರನ್ನು ಈ ಯೋಜನೆಗೆ ಇಡಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನಸಂಖ್ಯೆಯನ್ನು ಜನಸಂಖ್ಯಾ ಲಾಭಾಂಶವೆಂದು ಪರಿಗಣಿಸಿದ್ದಾರೆ ಮತ್ತು ರಾಷ್ಟ್ರವನ್ನು ನಿರ್ಮಿಸಲು ಇದರ ಬಲವನ್ನು ಬಳಸಲು ಯೋಜಿಸಿದ್ದಾರೆ. ಖೇಲೋ ಇಂಡಿಯಾದಂತಹ ಕಾರ್ಯಕ್ರಮಗಳ ಮೂಲಕ ಪ್ರಧಾನಿ ಮೋದಿ ಯುವಜನರಲ್ಲಿ ಸಂಚಲನ ಮೂಡಿಸಿದ್ದಾರೆಂದು ತಿಳಿಸಿದರು. ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ. ಮುಂದಿನ ಒಲಿಂಪಿಕ್ಸ್‌ಗೆ ರಾಜ್ಯವು 75 ಕ್ರೀಡಾಪಟುಗಳನ್ನು ದತ್ತು ತೆಗೆದುಕೊಂಡಿದ್ದು, ಪದಕ ಗೆಲ್ಲಲು ತರಬೇತಿ ನೀಡಲಾಗುತ್ತಿದೆ. ಒಂದು ವಾರದ ಯುವಜನೋತ್ಸವವು ಕರ್ನಾಟಕದ ಯುವಜನತೆಗೆ ಸ್ಪೂರ್ತಿಯಾಗಬೇಕು ಎಂದರು.

Also Read  ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ

error: Content is protected !!
Scroll to Top